ಸಮರಸ ಚಿತ್ರಸುದ್ದಿ: ಕುಂಬಳೆ: ಬದಿಯಡ್ಕದಲ್ಲಿ ಜರಗುತ್ತಿರುವ ಕುಂಬಳೆ ಉಪಜಿಲ್ಲಾ ಶಾಲಾ ಕಲೋತ್ಸವದ ಹೈಸ್ಕೂಲ್ ವಿಭಾಗದ ಕನ್ನಡ ಪ್ರಬಂಧ ಸ್ಪರ್ಧೆಯಲ್ಲಿ ಸೂರಂಬೈಲು ಸರ್ಕಾರಿ ಪ್ರೌಢಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿ ಗಿರಿಧರ್ ಎಸ್. ಕೆ. 'ಎ' ಗ್ರೇಡ್ನೊಂದಿಗೆ ಪ್ರಥಮ ಸ್ಥಾನ ಗಳಿಸಿದ್ದಾನೆ.
ಪ್ರತಿಭಾ ಪ್ರದರ್ಶನದ ಮೂಲಕ ಶಾಲೆಗೆ ಕೀರ್ತಿ ತಂದ ವಿದ್ಯಾರ್ಥಿಯ ಸಾಧನೆಗೆ ಶಾಲಾ ರಕ್ಷಕ-ಶಿಕ್ಷಕ ಸಂಘ (ಪಿಟಿಎ) ಹಾಗೂ ಶಿಕ್ಷಕ ವೃಂದದವರು ಹೃತ್ಪೂರ್ವಕ ಅಭಿನಂದನೆ ಸಲ್ಲಿಸಿದ್ದಾರೆ.

-GIRIDHAR%20SK.jpg)
