ಸಮರಸ ಚಿತ್ರಸುದ್ದಿ: ಕುಂಬಳೆ: ಅಡೂರಿನಲ್ಲಿ ಇತ್ತೀಚೆಗೆ ನಡೆದ ಕುಂಬಳೆ ಉಪಜಿಲ್ಲಾ ಗಣಿತ ಮೇಳದ ಯುಪಿ ವಿಭಾಗದ ಸ್ಥಿರ ಮಾದರಿ (ಸ್ಟಿಲ್ ಮಾಡಲ್) ಸ್ಪರ್ಧೆಯಲ್ಲಿ ಸೂರಂಬೈಲು ಸರ್ಕಾರಿ ಪ್ರೌಢಶಾಲೆಯ 6ನೇ ತರಗತಿಯ ವಿದ್ಯಾರ್ಥಿ ಪ್ರಣಯ್ 'ಎ' ಗ್ರೇಡ್ನೊಂದಿಗೆ ಪ್ರಥಮ ಸ್ಥಾನ ಗಳಿಸಿದ್ದಾನೆ.
ಪ್ರತಿಭಾ ಪ್ರದರ್ಶನದ ಮೂಲಕ ಶಾಲೆಗೆ ಕೀರ್ತಿ ತಂದಿರುವ ವಿದ್ಯಾರ್ಥಿಯ ಸಾಧನೆಗೆ ಶಾಲಾ ರಕ್ಷಕ-ಶಿಕ್ಷಕ ಸಂಘ, ಶಿಕ್ಷಕ ವೃಂದ ಹಾಗೂ ಗ್ರಾಮಸ್ಥರು ಹೃತ್ಪೂರ್ವಕ ಅಭಿನಂದನೆ ಸಲ್ಲಿಸಿದ್ದಾರೆ.

-PRANAY.jpeg)
