HEALTH TIPS

ಕಾಂಗ್ರೆಸ್ ಕಾರ್ಯಕರ್ತರ ಹತ್ಯೆಯಿಂದ ಪಕ್ಷ ದುರ್ಬಲಗೊಳಿಸಲು ಸಾಧ್ಯವಿಲ್ಲ: ಬಿ.ಪಿ. ಪ್ರದೀಪ್ ಕುಮಾರ್

ಪೆರ್ಲ: ಯುವ ಕಾಂಗ್ರೆಸ್ ಮಂಡಲ ಕಾರ್ಯದರ್ಶಿಯಾಗಿದ್ದ ಜಬ್ಬಾರ್ ಪೆರ್ಲ ಅವರನ್ನು ಹತ್ಯೆಗೈದು ಕಾಂಗ್ರೆಸ್ ಪಕ್ಷವನ್ನು ದುರ್ಬಲಗೊಳಿಸಬಹುದೆಂಬ ವಿರೋಧಿಗಳ ದುರುದ್ದೇಶ ಎಂದಿಗೂ ಈಡೇರದು. ಬದಲಾಗಿ, ಅವರ ತ್ಯಾಗ ಮತ್ತು ಬಲಿದಾನದಿಂದ ಪ್ರೇರಣೆ ಪಡೆದು ಕಾಂಗ್ರೆಸ್ ಹಾಗೂ ಯುವ ಕಾಂಗ್ರೆಸ್ ಸಂಘಟನೆಗಳು ಗಡಿನಾಡಿನಲ್ಲಿ ಇನ್ನಷ್ಟು ಬಲಿಷ್ಠವಾಗಿ ಬೆಳೆದು ನಿಂತಿವೆ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ (ಡಿಸಿಸಿ) ಉಪಾಧ್ಯಕ್ಷ ಬಿ.ಪಿ. ಪ್ರದೀಪ್ ಕುಮಾರ್ ಹೇಳಿದರು. 


ಎಣ್ಮಕಜೆ ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಹಾಗೂ ಯುವ ಕಾಂಗ್ರೆಸ್ ಸಮಿತಿಗಳ ಜಂಟಿ ಆಶ್ರಯದಲ್ಲಿ ಪೆರ್ಲದ ಇಂದಿರಾ ಭವನದಲ್ಲಿ ಆಯೋಜಿಸಲಾಗಿದ್ದ 17ನೇ ವರ್ಷದ ‘ಜಬ್ಬಾರ್ ಹುತಾತ್ಮ ದಿನಾಚರಣೆ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಡಲ ಕಾಂಗ್ರೆಸ್ ಅಧ್ಯಕ್ಷ ಬಿ.ಎಸ್. ಗಾಂಭೀರ ವಹಿಸಿದ್ದರು. ಇದೇ ವೇಳೆ ಡಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಸೋಮಶೇಖರ ಜೆ.ಎಸ್., ಲಕ್ಷ್ಮಣ ಪ್ರಭು, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕಾರ್ತಿಕೇಯನ್ ಪೆರಿಯ, ಎಣ್ಮಕಜೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಕುಸುಮಾವತಿ ಟೀಚರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಲೋಕನಾಥ್ ಶೆಟ್ಟಿ, ಉಪಾಧ್ಯಕ್ಷ ಆಮು ಅಡ್ಕಸ್ಥಳ, ಶೆರಿಲ್ ಕಯ್ಯಾಂಕೂಡಲ್, ಜುನೈದ್ ಉರ್ಮಿ, ಬ್ಲಾಕ್ ಪಂಚಾಯತ್ ಸದಸ್ಯೆ ಮಿಸ್ರಿಯಾ ಕರೀಂ ಹಾಗೂ ಪ್ರಿನ್ಸಿ ಸೇರಿದಂತೆ ಹಲವು ಮುಖಂಡರು ಹುತಾತ್ಮ ಜಬ್ಬಾರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು.

ಇದೇ ಸಮಾರಂಭದಲ್ಲಿ ರಾಜ್ಯ ಮಟ್ಟದ ಶಾಲಾ ಕ್ರಿಕೆಟ್ ತಂಡಕ್ಕೆ ಆಯ್ಕೆಯಾಗಿರುವ ಪ್ರತಿಭಾನ್ವಿತ ಕ್ರೀಡಾಪಟು ಅಫ್ತಾಲ್ ಕಾಟುಕುಕ್ಕೆ ಅವರನ್ನು ಸನ್ಮಾನಿಸಿ, ಅಭಿನಂದಿಸಲಾಯಿತು.

ಯುವ ಕಾಂಗ್ರೆಸ್ ಮಂಡಲ ಅಧ್ಯಕ್ಷ ಫಾರೂಕ್ ಪಿ.ಎಂ. ಸ್ವಾಗತಿಸಿದರು, ಉಪಾಧ್ಯಕ್ಷ ನಜೀಬ್ ಶೇಣಿ ವಂದಿಸಿದರು. 





 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries