ಡಿಸೆಂಬರ್ 18ರಿಂದ 27ರವರೆಗೆ ಪುನಃಪ್ರತಿಷ್ಠಾ ಬ್ರಹ್ಮಕಲಶೋತ್ಸವ; ನೂತನ ಸದಸ್ಯರ ಸೇರ್ಪಡೆಯೊಂದಿಗೆ ಸಮಿತಿ ವಿಸ್ತರಣೆ
ಕಾಸರಗೋಡು: ಬೇವಿಂಜೆ ಮಯಂಗರ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಮುಂಬರುವ ಡಿಸೆಂಬರ್ 18ರಿಂದ 27ರವರೆಗೆ ಜರುಗಲಿರುವ ಪುನಃಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಪೂರ್ವಭಾವಿಯಾಗಿ ಮಾತೃಸಮಿತಿ ಸಭೆಯು ದೇವಸ್ಥಾನದ ಆವರಣದಲ್ಲಿ ನಡೆಯಿತು.
ಸಭೆಯ ಅಧ್ಯಕ್ಷತೆ ವಹಿಸಿದ್ದ ಜಯಕುಮಾರಿ ಅವರು ಸಮಿತಿಯ ಮುಂದಿನ ಕಾರ್ಯಚಟುವಟಿಕೆಗಳ ಕುರಿತು ವಿವರಿಸಿದರು. ಮುಖ್ಯ ಭಾಷಣ ಮಾಡಿದ ಬ್ರಹ್ಮಕಲಶೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ಗಿರಿಧರನ್ ಅವರು ಉತ್ಸವದ ಯಶಸ್ಸಿಗೆ ಎಲ್ಲರ ಸಕ್ರಿಯ ಸಹಕಾರ ಕೋರಿದರು.
ಗೋವಿಂದ ಬಳ್ಳಮೂಲೆ ಅವರು ಮಾತೃಸಮಿತಿಯ ವಿವಿಧ ಚಟುವಟಿಕೆಗಳ ಬಗ್ಗೆ ಸಮಗ್ರ ಮಾಹಿತಿ ನೀಡಿದರು. ಕ್ಷೇತ್ರದ ಆಡಳಿತಾಧಿಕಾರಿ ವಿಷ್ಣುಮೂರ್ತಿ ಕಕ್ಕಿಲ್ಲಾಯ ಸಾಂದರ್ಭಿಕವಾಗಿ ಮಾತನಾಡಿದರು. ರವಿ ಬೇವಿಂಜೆ ಅವರು ಮಾತೃಸಮಿತಿಯ ಬಲವರ್ಧನೆಗೆ ಸೂಕ್ತ ಮಾರ್ಗದರ್ಶನ ನೀಡಿದರು.
ಸಭೆಯಲ್ಲಿ ಉತ್ಸವದ ಸುಸೂತ್ರ ನಿರ್ವಹಣೆಗಾಗಿ ಮಾತೃಸಮಿತಿ ಕೈಗೊಳ್ಳಬೇಕಾದ ಜವಾಬ್ದಾರಿಗಳ ಕುರಿತು ಸುದೀರ್ಘವಾಗಿ ಚರ್ಚಿಸಲಾಯಿತು. ಇದೇ ಸಂದರ್ಭದಲ್ಲಿ ಕಾರ್ಯಕಾರಿ ಸಮಿತಿ ಹಾಗೂ ಮಾತೃಸಮಿತಿಗೆ ನೂತನ ಸದಸ್ಯರನ್ನು ಸೇರ್ಪಡೆಗೊಳಿಸಿ ಸಮಿತಿಯನ್ನು ವಿಸ್ತರಿಸಲಾಯಿತು. ವತ್ಸಲಾ ಕಾರ್ಯಕ್ರಮ ನಿರೂಪಿಸಿದರು.

.jpg)
.jpg)
