HEALTH TIPS

ಟ್ರಂಪ್‌, ಷಿ, ಪುಟಿನ್‌ ಜೊತೆ ವೇದಿಕೆ ಹಂಚಿಕೊಳ್ಳಲಾಗದ ಮೋದಿ: ರಾಹುಲ್ ಟೀಕೆ

ನವದೆಹಲಿ:  ಕಾಂಗ್ರೆಸ್ ಅಧಿಕಾರದಲ್ಲಿದ್ದಿದ್ದರೆ ಭಾರತದ ಪ್ರಧಾನಮಂತ್ರಿ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಚೀನಾ ಅಧ್ಯಕ್ಷ ಷಿ ಜಿನ್‌ಪಿಂಗ್ ಮತ್ತು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ಒಂದೇ ವೇದಿಕೆಯಲ್ಲಿ ಕುಳಿತು ಮಾತುಕತೆ ನಡೆಸುತ್ತಿದ್ದರು ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.


ಟ್ರಂಪ್, ಷಿ ಜಿನ್‌ಪಿಂಗ್ ಮತ್ತು ಪುಟಿನ್ ಅವರು ಮೊದಲ ಬಾರಿಗೆ ತ್ರಿಪಕ್ಷೀಯ ಮಾತುಕತೆ ನಡೆಸಿದ ಚಿತ್ರವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿರುವ ರಾಹುಲ್ ಗಾಂಧಿ, ‘ರಾಜಿ ಮಾಡಿಕೊಂಡಿರುವ ಪ್ರಧಾನಮಂತ್ರಿಗೆ ಎಂದಿಗೂ ಈ ಮೇಜಿನ ಬಳಿ ಕುಳಿತುಕೊಳ್ಳಲು ಸಾಧ್ಯವಿಲ್ಲ’ ಎಂದು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದಾರೆ.

ಗುರುವಾರ ನಡೆದ ಏಷ್ಯಾ-ಪೆಸಿಫಿಕ್ ಆರ್ಥಿಕ ಸಹಕಾರ (ಎಪಿಇಸಿ) ಶೃಂಗಸಭೆಯ ಸಂದರ್ಭದಲ್ಲಿ ಈ ಬೆಳವಣಿಗೆ ನಡೆದಿದೆ. ವಿಶ್ವಸಂಸ್ಥೆಯಲ್ಲಿ ಸುಧಾರಣೆ, ತೈಲ ಪೂರೈಕೆ ಹೆಚ್ಚಳ ಹಾಗೂ ಪರಮಾಣು ಅಪಾಯಗಳನ್ನು ತಗ್ಗಿಸುವುದು ಸೇರಿದಂತೆ ಹಲವು ಪ್ರಮುಖ ವಿಷಯಗಳ ಕುರಿತು ಚೀನಾ, ರಷ್ಯಾ ಮತ್ತು ಅಮೆರಿಕ ಮಾತುಕತೆ ನಡೆಸಿ ಒಪ್ಪಂದಕ್ಕೆ ಬಂದಿವೆ.

ಎಪಿಇಸಿ 1989ರಲ್ಲಿ ಸ್ಥಾಪನೆಯಾದ ಪ್ರಾದೇಶಿಕ ಆರ್ಥಿಕ ಸಹಕಾರ ವೇದಿಕೆಯಾಗಿದೆ. ಏಷ್ಯಾ-ಪೆಸಿಫಿಕ್ ಪ್ರದೇಶದಲ್ಲಿ ಮುಕ್ತ ವ್ಯಾಪಾರ, ಹೂಡಿಕೆ ಮತ್ತು ಆರ್ಥಿಕ ಸಹಕಾರವನ್ನು ಉತ್ತೇಜಿಸುವ ಉದ್ದೇಶ ಹೊಂದಿರುವ ಈ ವೇದಿಕೆಯಲ್ಲಿ 21 ಸದಸ್ಯ ರಾಷ್ಟ್ರಗಳಿವೆ. ಭಾರತವು ಎಪಿಇಸಿಯ ಸದಸ್ಯ ರಾಷ್ಟ್ರವಾಗಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries