HEALTH TIPS

ಗಾಂಜಾ ಸಾಗಾಟ-ಇಬ್ಬರು ಅಪರಾಧಿಗಳಿಗೆ ಕಠಿಣ ಜೈಲು ಶಿಕ್ಷೆ, ದಂಡ

 ಕಾಸರಗೋಡು: ಕಾರಿನಲ್ಲಿ ಗಾಂಜಾ ಸಾಗಿಸಿದ ಪ್ರಕರಣದ ಅಪರಾಧಿಗಳಿಬ್ಬರಿಗೆ ಕಾಸರಗೋಡು ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ದ್ವಿತೀಯ)ದ ನ್ಯಾಯಾಧೀಶ ರಾಮು ರಮೇಶ್ ಚಂದ್ರಭಾನು ಇಬ್ಬರು ಆರೋಪಿಗಳಿಗೆ ಒಂದು ವರ್ಷ ಕಠಿಣ ಸಜೆ ಮತ್ತು ತಲಾ 20 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ.

ಅಜಾನೂರಿನ ಮೂಲಕ್ಕಂಡಂ ನಿವಾಸಿ ವಿ. ಪ್ರವೀಣ್ (43) ಮತ್ತು ವೆಲ್ಲಿಕೋತ್ ನಿವಾಸಿ ಪಿ. ವೈಶಾಖ್ ಅಲಿಯಾಸ್ ಜಿತು (30) ಎಂಬವರಿಗೆ ಈ ಶಿಕ್ಷೆ ವಿಧಿಸಲಾಗಿದೆ. ದಂಡ ಪಾವತಿಸದಿದ್ದಲ್ಲಿ, ಅಪರಾಧಿಗಳು ಎರಡು ತಿಂಗಳು ಹೆಚ್ಚುವರಿ ಜೈಲು ಶಿಕ್ಷೆ ಅನುಭವಿಸುವಂತೆಯೂ ತೀರ್ಪಿನಲ್ಲಿ ತಿಳಿಸಲಾಗಿದೆ.

2021ರ ಅಕ್ಟೋಬರ್ 10ರಂದು ಕಾಞಂಗಾಡ್‌ನ ಹಳೇ ಬಸ್ ನಿಲ್ದಾಣದ ಬಳಿ ಕಾಞಂಗಾಡ್-ಕಾಸರಗೋಡು ರಾಜ್ಯ ಹೆದ್ದಾರಿಯಲ್ಲಿ ಹೊಸದುರ್ಗ ಠಾಣೆ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 2.050 ಕೆಜಿ ಗಾಂಜಾ ವಶಪಡಿಸಿಕೊಂಡು, ಪ್ರವೀಣ್ ಹಾಗೂ ವೈಶಾಖ್‌ನನ್ನು ಬಂಧಿಸಲಾಗಿತ್ತು. ಅಂದಿನ ಹೊಸದುರ್ಗ ಪೊಲೀಸ್ ಠಾಣೆ ಉಪ-ಇನ್ಸ್‌ಪೆಕ್ಟರ್ ಎ. ಬಾವಾ ಮತ್ತು ತಂಡ ಕಾರ್ಯಾಚರಣೆ ನಡೆಸಿತ್ತು. 


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries