ಕಾಸರಗೋಡು: ಮೊಗ್ರಾಲ್ ಪುತ್ತೂರು ಗ್ರಾಮ ಪಂಚಾಯಿತಿ ಕಚೇರಿ ಸನಿಹದ ಕಲ್ಲಂಗೈ ರೈಲು ಹಳಿಯಲ್ಲಿ ಯುವಕನೊಬ್ಬನ ಮೃತದೇಹ ರೈಲು ಡಿಕ್ಕಿಯಾದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತ ವ್ಯಕ್ತಿಯ ಜೇಬಿನಲ್ಲಿ ಪಾನ್‌ಕಾರ್ಡ್ ಪತ್ತೆಯಾಗಿದ್ದು, ಅದರಲ್ಲಿ ಅಸ್ಸಾಂ ಇಮಿಲೋಮುರ ಎಂಬ ವಿಳಾಸ ನಮೂದಿಸಲಾಗಿದೆ. ಮೃತ ವ್ಯಕ್ತಿಗೆ 30 ವರ್ಷ ಪ್ರಾಯ ಅಂದಾಜಿಸಲಾಗಿದೆ.
ಮೃತದೇಹ ಜೀನ್ಸ್ ಪ್ಯಾಂಟ್ ಮತ್ತು ಜಾಕೆಟ್ ಧರಿಸಿದ ಸ್ಥಿತಿಯಲ್ಲಿದ್ದು, ಕಾಸರಗೋಡು ಪೊಲೀಸರು ಸ್ಥಳಕ್ಕೆ ಆಗಮಿಸಿ ಮೃತದೇಹವನ್ನು ಜನರಲ್ ಆಸ್ಪತ್ರೆಯ ಶವಾಗಾರಕ್ಕೆ ಸಾಗಿಸಿದ್ದಾರೆ. ಮೃತ ವ್ಯಕ್ತಿಯ ಗುರುತು ಪತ್ತೆ ಹಚ್ಚಲು ಸಾಧ್ಯವಾಗದೇ ಇರುವ ಹಿನ್ನೆಲೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿಲ್ಲ. ಪೊಲೀಸರು ಈ ಬಗ್ಗೆ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ. ಮಲಬಾರ್ ಎಕ್ಸ್‌ಪ್ರೆಸ್ ರೈಲುಗಾಡಿ ಡಿಕ್ಕಿ ಹೊಡೆದು ಈ ವ್ಯಕ್ತಿ ಸಾವನ್ನಪ್ಪಿರಬೇಕೆಂದು ಸಂಶಯಿಸಲಾಗಿದೆ.


