HEALTH TIPS

ಹೆದ್ದಾರಿಯಲ್ಲಿ ನಿಲ್ಲಿಸಿದ್ದ ಲಾರಿಗೆ ಬೈಕ್ ಡಿಕ್ಕಿ: ದೈವಕೋಲಕ್ಕೆ ತೆರಳುತ್ತಿದ್ದ ಇಬ್ಬರು ಯುವಕರ ದಾರುಣ ಸಾವು

ಕಾಸರಗೋಡು: ರಾಷ್ಟ್ರೀಯ ಹೆದ್ದಾರಿಯಲ್ಲಿ ಅಸಮರ್ಪಕವಾಗಿ ನಿಲ್ಲಿಸಲಾಗಿದ್ದ ಲಾರಿಯ ಹಿಂಭಾಗಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ, ಬೈಕ್‌ನಲ್ಲಿದ್ದ ಇಬ್ಬರು ಯುವಕರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.

ನೀಲೇಶ್ವರ ಪಡಿಞಾರ್ ಕೊಳವಯಲ್ ನಿವಾಸಿಗಳಾದ ಕಲ್ಲಾಲಿ ವೀಟಿಲ್ ಮನೋಜ್ ಕುಮಾರ್ ಅವರ ಪುತ್ರ ಅನುರಾಗ್ ಮನೋಜ್ (24) ಹಾಗೂ ಪುಳಿಚ್ಚಿರಂವೀಟಿಲ್ ವೇಣುಗೋಪಾಲ್ ಅವರ ಪುತ್ರ ಆನಂದ ಕೃಷ್ಣನ್ (24) ಮೃತಪಟ್ಟ ದುರ್ದೈವಿಗಳು.

ಹೊಸದುರ್ಗ ತೆರುತ್ ಆರೆಯಿಲ್ ಭಗವತಿ ಕ್ಷೇತ್ರದಲ್ಲಿ ನಡೆಯುತ್ತಿರುವ ದೈವಕೋಲ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಯುವಕರಿಬ್ಬರು ಸೋಮವಾರ ರಾತ್ರಿ ನೀಲೇಶ್ವರದಿಂದ ಬೈಕ್‌ನಲ್ಲಿ ತೆರಳುತ್ತಿದ್ದರು. ಈ ವೇಳೆ ಪಡನ್ನಕ್ಕಾಡ್ ನೆಹರೂ ಕಾಲೇಜು ಸಮೀಪದ ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ ನಿಲ್ಲಿಸಲಾಗಿದ್ದ ಲಾರಿಯ ಹಿಂಬದಿಗೆ ಬೈಕ್ ರಭಸವಾಗಿ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಇಬ್ಬರನ್ನೂ ತಕ್ಷಣವೇ ಕಾಂಞಂಗಾಡ್ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಅಷ್ಟರಲ್ಲೇ ಇಬ್ಬರೂ ಮೃತಪಟ್ಟಿದ್ದರು.

ಮೃತರ ಪೈಕಿ ಅನುರಾಗ್ ಮನೋಜ್ ನೀಲೇಶ್ವರದ ಹೋಟೆಲೊಂದರಲ್ಲಿ ಕ್ಯಾಷಿಯರ್ ಆಗಿ ಕೆಲಸ ಮಾಡುತ್ತಿದ್ದರು. ಮೃತದೇಹಗಳನ್ನು ಜಿಲ್ಲಾ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಗೊಳಪಡಿಸಿದ ಬಳಿಕ ವಾರಸುದಾರರಿಗೆ ಹಸ್ತಾಂತರಿಸಲಾಯಿತು. ಘಟನೆಗೆ ಸಂಬಂಧಿಸಿದಂತೆ ಲಾರಿ ಚಾಲಕನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಲಾರಿಯನ್ನು ವಶಕ್ಕೆ ಪಡೆದಿದ್ದಾರೆ. 






ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries