ಬದಿಯಡ್ಕ: ಮಾನ್ಯ ಶ್ರೀ ಚೌಡೇಶ್ವರಿ ದೇವಿ ಸನ್ನಿಧಿಯಲ್ಲಿ ಕಾರ್ತಿಕ ಹುಣ್ಣಿಮೆಯ ಅಂಗವಾಗಿ ನಡೆದ ಅರ್ಧ ಏಕಾಹ ಭಜನಾ ಸೇವೆಗೆ ಗೊಲ್ಲ ಸಮಾಜ ಸಂಘ ಮಾನ್ಯ ಇದರ ಅಧ್ಯಕ್ಷರಾದ ನವೀನ್ ಚಂದ್ರ ಎಂ.ಎಸ್. ದೀಪಪ್ರಜ್ವಲನೆ ಮೂಲಕ ಚಾಲನೆ ನೀಡಿದರು. ಸೂರ್ಯೋದಯದಿಂದ ಸೂರ್ಯಾಸ್ತದವರೆಗೆ ಭಜನಾ ಸೇವೆಯು ನಡೆಯಿತು. ವಿವಿಧ ಭಜನಾ ತಂಡಗಳು ಪಾಲ್ಗೊಂಡರು. ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನ ಪ್ರಸಾದ ವಿತರಣೆ ನಡೆಯಿತು.

.jpg)
