HEALTH TIPS

ಕಾಸರಗೋಡು ಜಿಲ್ಲಾ ಕುಲಾಲ ಸಂಘಕ್ಕೆ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯ ಗರಿ

ಮಂಜೇಶ್ವರ: ಗಡಿನಾಡಿನಲ್ಲಿ ಸಮಾಜಮುಖಿ ಕಾರ್ಯಗಳ ಮೂಲಕ ಸಕ್ರಿಯವಾಗಿರುವ ಕಾಸರಗೋಡು ಜಿಲ್ಲಾ ಕುಲಾಲ ಸಂಘಕ್ಕೆ 2026-27ನೇ ಸಾಲಿನ 'ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ' (ಸಮಾಜ ಸೇವೆ - ಗಡಿನಾಡು ಕನ್ನಡಿಗ ವಿಭಾಗ) ಲಭಿಸಿದೆ. ಸಮುದಾಯದ ಸಂಘಟನೆ, ಧಾರ್ಮಿಕ ಚಟುವಟಿಕೆ ಹಾಗೂ ಸಮಾಜ ಸೇವೆಯನ್ನು ಗುರುತಿಸಿ ಸಂಸ್ಥೆಗೆ ಈ ಗೌರವ ಸಮರ್ಪಿಸಲಾಗಿದೆ.

ಮಂಗಳೂರಿನ ನೆಹರು ಮೈದಾನದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್, ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಶಾಸಕ ವೇದವ್ಯಾಸ ಕಾಮತ್, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಐಎಎಸ್ ಹಾಗೂ ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ ಸೇರಿದಂತೆ ಹಲವು ಗಣ್ಯರ ಉಪಸ್ಥಿತಿಯಲ್ಲಿ ಪ್ರಶಸ್ತಿ ಹಸ್ತಾಂತರಿಸಲಾಯಿತು.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries