ಜಿಲ್ಲಾ ಪಂಚಾಯಿತಿ ನಿಧಿಯಿಂದ ನಿರ್ಮಾಣ; ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಸಾಬು ಅಬ್ರಹಾಂ ಅವರಿಂದ ಲೋಕಾರ್ಪಣೆ
ಮಂಜೇಶ್ವರ: ಕಾಸರಗೋಡು ಜಿಲ್ಲಾ ಪಂಚಾಯಿತಿ ನಿಧಿಯಿಂದ ಕಾಂಕ್ರೀಟೀಕರಣಗೊಂಡ ವರ್ಕಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪೆರ್ಮನಂಜಿ-ಮುಡಿಮಾರು ರಸ್ತೆಯನ್ನು ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಸಾಬು ಅಬ್ರಹಾಂ ಉದ್ಘಾಟಿಸಿದರು.
ವರ್ಕಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಉಮ್ಮರ್ ಬೋರ್ಕಳ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪಂಚಾಯಿತಿ ಸದಸ್ಯ ಹರ್ಷಾದ್ ವರ್ಕಾಡಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಮಂಜೇಶ್ವರ ಬ್ಲಾಕ್ ಪಂಚಾಯಿತಿ ಉಪಾಧ್ಯಕ್ಷೆ ಕಮಲಾಕ್ಷಿ ಕೆ., ವರ್ಕಾಡಿ ಗ್ರಾಮ ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ಪುರುಷೋತ್ತಮ ಅರಿಬೈಲು, ಸದಸ್ಯರಾದ ಮಾಲತಿ, ತುಳಸಿ ಕುಮಾರಿ, ಲೀನಾ ಟೆಲ್ಲಿಸ್, ಮಾಜಿ ಸದಸ್ಯರಾದ ಮೊಹಮ್ಮದ್ ಮಜಾಲು, ರಜಾಕ್ ಕೆದುಂಬಾಡಿ, ವರ್ಕಾಡಿ ಸೇವಾ ಸಹಕಾರಿ ಬ್ಯಾಂಕ್ ಅಧ್ಯಕ್ಷ ಮೊಹಮ್ಮದ್ ಹನೀಫ್, ವಿನೋದ್ ಕುಮಾರ್ ಪಾವೂರು ಮೊದಲಾದವರು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ರಸ್ತೆ ಕಾಮಗಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಿದ ಗುತ್ತಿಗೆದಾರ ಸಿ.ಎಚ್. ಅಬ್ದುಲ್ ಖಾದರ್ ಅವರನ್ನು ಸನ್ಮಾನಿಸಲಾಯಿತು. ಆರಿಫ್ ಮಚ್ಚಂಪಾಡಿ ಕಾರ್ಯಕ್ರಮ ನಿರೂಪಿಸಿ, ನಾಗೇಶ್ ಬಳ್ಳೂರು ವಂದಿಸಿದರು.

.jpg)
.jpg)
