HEALTH TIPS

ʼಸರ್ವಾಧಿಕಾರಿʼ ಕಾಂಗ್ರೆಸ್‌ನ ಭಾರತ ಶೃಂಗಸಭೆ ದೇಶ ವಿರೋಧಿ ಸಮಾವೇಶ: ಕೇಂದ್ರ ಸಚಿವ

ಹೈದರಾಬಾದ್: ಕಾಂಗ್ರೆಸ್‌ ಪಕ್ಷವು ಹೈದರಾಬಾದ್‌ನಲ್ಲಿ ಆಯೋಜಿಸಿದ್ದ ಎರಡು ದಿನಗಳ ʼಭಾರತ ಶೃಂಗಸಭೆʼ ಕುರಿತು ಕೇಂದ್ರ ಕಲ್ಲಿದ್ದಲು ಮತ್ತು ಗಣಿ ಸಚಿವ ಜಿ. ಕಿಶನ್‌ ರೆಡ್ಡಿ ವಾಗ್ದಾಳಿ ನಡೆಸಿದ್ದಾರೆ. 


ರಾಹುಲ್ ಗಾಂಧಿಯನ್ನು ಅಂತರರಾಷ್ಟ್ರೀಯ ನಾಯಕ ಎಂಬಂತೆ ಬಿಂಬಿಸುವ ಹತಾಶ ಪ್ರಯತ್ನ ಮಾಡುತ್ತಿರುವ ಕಾಂಗ್ರೆಸ್ಸೇ ನಿಜವಾದ ಫ್ಯಾಸಿಸ್ಟ್ ಪಕ್ಷ ಎಂದು ಆರೋಪಿಸಿದ ಅವರು, ʼಭಾರತ ಶೃಂಗಸಭೆʼಯು ದೇಶ ವಿರೋಧಿ ಕಾರ್ಯಕ್ರಮ ಎಂಬುದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಹೇಳಿದ್ದಾರೆ. 

ತೆಲಂಗಾಣ ಬಿಜೆಪಿ ರಾಜ್ಯ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಕಿಶನ್‌ ರೆಡ್ಡಿ, ಪ್ರಧಾನಿ ನರೇಂದ್ರ ಮೋದಿ ಸರ್ಕಾರವನ್ನು ಸರ್ವಾಧಿಕಾರಿ ಆಡಳಿತ ಎಂದು ಕರೆದಿರುವ ರಾಹುಲ್‌ ಗಾಂಧಿಗೆ ತಿರುಗೇಟು ನೀಡಿದ್ದಾರೆ.

ದೇಶವು ತುರ್ತು ಪರಿಸ್ಥಿತಿಯ ಕರಾಳ ದಿನಗಳನ್ನು ಮರೆತಿಲ್ಲ. ಆ 18 ತಿಂಗಳ ಅವಧಿಯಲ್ಲಿ ಕಾಂಗ್ರೆಸ್ ಪತ್ರಿಕಾ ಸ್ವಾತಂತ್ರ್ಯವನ್ನು ಹತ್ತಿಕ್ಕಿತ್ತು. ಮೂಲಭೂತ ಹಕ್ಕುಗಳನ್ನು ನಿಗ್ರಹಿಸಿತ್ತು. ಜಯಪ್ರಕಾಶ್ ನಾರಾಯಣ್, ಅಟಲ್ ಬಿಹಾರಿ ವಾಜಪೇಯಿ, ಎಲ್.ಕೆ. ಅಡ್ವಾಣಿ ಮತ್ತು ಜಾರ್ಜ್ ಫೆರ್ನಾಂಡಿಸ್ ಸೇರಿದಂತೆ ಲಕ್ಷಾಂತರ ಜನರನ್ನು ಜೈಲಿಗೆ ಹಾಕಿತ್ತು ಎಂದು ಆರೋಪಿಸಿದ್ದಾರೆ.

ʼಭಾರತ ಶೃಂಗಸಭೆʼಯಿಂದ ತೆಲಂಗಾಣಕ್ಕೆ ಹೂಡಿಕೆ ಬರುತ್ತದೆ ಎಂದು ಮುಖ್ಯಮಂತ್ರಿ ರೇವಂತ್ ರೆಡ್ಡಿ ಹೇಳಿರುವುದಕ್ಕೆ ಪ್ರತಿಕ್ರಿಯಿಸಿದ ಕಿಶನ್‌ ರೆಡ್ಡಿ, ವಿದೇಶಿ ಅತಿಥಿಗಳಿದ್ದ ವೇದಿಕೆಯಲ್ಲಿಯೇ ದೇಶದಲ್ಲಿ ಪ್ರಜಾಪ್ರಭುತ್ವ ಅಪಾಯದಲ್ಲಿದೆ, ಚುನಾವಣೆಗಳಲ್ಲಿ ಅಕ್ರಮ ನಡೆಯುತ್ತಿದೆ, ದೇಶದ ಆಡಳಿತ ಫ್ಯಾಸಿಸ್ಟರ ಕೈಯಲ್ಲಿದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಹೀಗಿದ್ದಾಗ, ʼಫ್ಯಾಸಿಸ್ಟರು ಆಳುತ್ತಿರುವʼ ನಾಡಿಗೆ ವಿದೇಶಿ ಬಂಡವಾಳ ಹೇಗೆ ಹರಿದು ಬರಲು ಸಾಧ್ಯ ಎಂದು ವ್ಯಂಗ್ಯವಾಗಿ ಪ್ರಶ್ನಿಸಿದ್ದಾರೆ.

ರೇವಂತ್ ರೆಡ್ಡಿ ಅವರ ಹೇಳಿಕೆಗಳಿಗೂ, ಸಮಾವೇಶಕ್ಕೆ ಬಂದ ಅತಿಥಿಗಳ ಪಟ್ಟಿಗೂ, ರಾಹುಲ್‌ ಗಾಂಧಿ ಭಾಷಣಕ್ಕೂ ಒಂದಕ್ಕೊಂದು ತಾಳೆಯಾಗುತ್ತಿಲ್ಲ ಎಂದು ಹೇಳಿದ ಕೇಂದ್ರ ಸಚಿವ, ಬಹುರಾಷ್ಟ್ರೀಯ ಕಂಪನಿಗಳು ಮತ್ತು ಡೇಟಾ ಸೆಂಟರ್‌ಗಳ ಹೂಡಿಕೆಗಳು ಆಂಧ್ರಪ್ರದೇಶ, ಕರ್ನಾಟಕ, ಗುಜರಾತ್ ಮತ್ತು ತೆಲಂಗಾಣಕ್ಕೆ ಬರುತ್ತಿರುವುದು ಮುಖ್ಯಮಂತ್ರಿ ರೇವಂತ್ ರೆಡ್ಡಿಯಿಂದಾಗಲೀ, ಕರ್ನಾಟಕ ಸಿಎಂ ಡಿ.ಕೆ. ಶಿವಕುಮಾರ್ ಅವರಿಂದಾಗಲೀ ಅಥವಾ ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಅವರಿಂದಾಗಿ ಅಲ್ಲ. ಮೋದಿ ಅವರು ಗುಜರಾತ್ ಮುಖ್ಯಮಂತ್ರಿಯಾಗಿದ್ದಾಗ ಆರಂಭಿಸಿದ ಹೂಡಿಕೆ ಸಮಾವೇಶಗಳ ಮಾದರಿ ಮತ್ತು ದೇಶದ ಪ್ರಧಾನಿಯಾದ ನಂತರ ಸೃಷ್ಟಿಸಿರುವ ಉದ್ಯಮಸ್ನೇಹಿ ವಾತಾವರಣದಿಂದಾಗಿ ಎಂದು ಪ್ರತಿಪಾದಿಸಿದ್ದಾರೆ. 






ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries