ಕಾಸರಗೋಡು: ಕಾಸರಗೋಡು ನುಳ್ಳಿಪ್ಪಾಡಿಯ ಡಾ. ವಾಮನ್ ರಾವ್ ಬೇಕಲ್ ಹಾಗೂ ಸಂಧ್ಯಾ ರಾಣಿ ಸಾರಥ್ಯದ ಕನ್ನಡ ಭವನ ಗ್ರಂಥಾಲಯ ಮತ್ತು ಕನ್ನಡ ಭವನ ಪ್ರಕಾಶನ ಸಂಸ್ಥೆಯ ವತಿಯಿಂದ, ಕನ್ನಡ ಭವನ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಸಹಯೋಗದೊಂದಿಗೆ ಮಂಗಳೂರಿನಲ್ಲಿ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಸಮಾರಂಭದಲ್ಲಿ ಮಾಜಿ ಸಚಿವ ಕೃಷ್ಣ ಜೆ. ಪಾಲೇಮಾರ್ ಅವರನ್ನು ವಾಮನ್ ರಾವ್ ಬೇಕಲ್-ಸಂಧ್ಯಾ ರಾಣಿ ದಂಪತಿ ಶಾಲು ಹೊದಿಸಿ, ಫಲಪುಷ್ಪ ನೀಡಿ ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಿದರು.


