ಕುಂಬಳೆ: ದೇಲಂತೊಟ್ಟು ಶ್ರೀ ಬಜೆ ಕ್ಷೇತ್ರದಲ್ಲಿ ನ. 9 ರಿಂದ ಡಿ.9 ರವರೆಗೆ ವಿಜೃಂಭಣೆಯಿಂದ ಜರುಗಲಿರುವ ವಿಶೇಷ ಕಾರ್ತಿಕ ದೀಪೋತ್ಸವ ಹಾಗೂ 2027ರ ಜನವರಿ 3 ಮತ್ತು 4 ರಂದು ನಡೆಯಲಿರುವ ವಾರ್ಷಿಕ ಜಾತ್ರಾ ಮಹೋತ್ಸವದ ಅಧಿಕೃತ ಆಮಂತ್ರಣ ಪತ್ರಿಕೆಯನ್ನು ಊರ ಭಕ್ತಾದಿಗಳ ಸಮ್ಮುಖದಲ್ಲಿ ಬಿಡುಗಡೆಗೊಳಿಸಲಾಯಿತು.
ಕಾರ್ಯಕ್ರಮದಲ್ಲಿ ಕ್ಷೇತ್ರದ ಪ್ರಮುಖರು, ಆಡಳಿತ ಸಮಿತಿ ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು. ಒಂದು ತಿಂಗಳ ಕಾಲ ನಡೆಯಲಿರುವ ದೀಪೋತ್ಸವ ಹಾಗೂ ಜಾತ್ರಾ ಮಹೋತ್ಸವದ ಧಾರ್ಮಿಕ ಮತ್ತು ಸಾಂಸ್ಕøತಿಕ ಕಾರ್ಯಕ್ರಮಗಳಲ್ಲಿ ಸರ್ವ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತನು-ಮನ-ಧನಗಳಿಂದ ಸಹಕರಿಸಬೇಕಾಗಿ ಸಮಿತಿ ವಿನಂತಿಸಿದೆ.

.jpg)
