HEALTH TIPS

ಶತಮಾನೋತ್ಸವದ ಸಂಭ್ರಮದಲ್ಲಿರುವ ಪೆರಡಾಲ ಸರಕಾರಿ ಪ್ರೌಢಶಾಲೆಗೆ ಗಡಿ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಎ.ಆರ್. ಸುಬ್ಬಯ್ಯಕಟ್ಟೆ ಭೇಟಿ


ಬದಿಯಡ್ಕ
:
ಶತಮಾನೋತ್ಸವದ ಸಂಭ್ರಮದಲ್ಲಿರುವ ಇಲ್ಲಿನ ಪೆರಡಾಲ ಸರಕಾರಿ ಪ್ರೌಢಶಾಲೆಗೆ (ಜಿ.ಎಚ್.ಎಸ್. ಪೆರಡಾಲ) ಕರ್ನಾಟಕ ಸರಕಾರದ ಗಡಿ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರಾದ ಎ.ಆರ್. ಸುಬ್ಬಯ್ಯಕಟ್ಟೆ ಅವರು ಭೇಟಿ ನೀಡಿ, ಶಾಲೆಯ ಶೈಕ್ಷಣಿಕ ಚಟುವಟಿಕೆಗಳನ್ನು ವೀಕ್ಷಿಸಿದರು.

ಈ ಸಂದರ್ಭದಲ್ಲಿ ಶತಮಾನೋತ್ಸವ ಸಮಿತಿಯ ವತಿಯಿಂದ ಅವರನ್ನು ಶಾಲು ಹೊದಿಸಿ, ಗೌರವಪೂರ್ವಕವಾಗಿ ಸ್ವಾಗತಿಸಲಾಯಿತು.

ಬಳಿಕ ಮಾತನಾಡಿದ ಎ.ಆರ್. ಸುಬ್ಬಯ್ಯಕಟ್ಟೆ ಅವರು, "ನೂರು ವರ್ಷಗಳ ಸುದೀರ್ಘ ಇತಿಹಾಸ ಹೊಂದಿರುವ ಪೆರಡಾಲ ಶಾಲೆಯು ಗಡಿಭಾಗದಲ್ಲಿ ಕನ್ನಡದ ಅಸ್ಮಿತೆಯನ್ನು ಉಳಿಸಿ ಬೆಳೆಸುವಲ್ಲಿ ಮಹತ್ತರ ಪಾತ್ರ ವಹಿಸಿದೆ. ಶತಮಾನೋತ್ಸವದ ಈ ಐತಿಹಾಸಿಕ ಸಂದರ್ಭದಲ್ಲಿ ಕೇವಲ ಉತ್ಸವಕ್ಕೆ ಸೀಮಿತವಾಗದೆ, ಶಾಲೆಯ ಮುಂದಿನ ಪೀಳಿಗೆಗೆ ಅನುಕೂಲವಾಗುವಂತಹ ಶಾಶ್ವತ ಅಭಿವೃದ್ಧಿ ಯೋಜನೆಗಳನ್ನು ರೂಪಿಸಬೇಕು," ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಜಿ.ಎಚ್.ಎಸ್. ಪೆರಡಾಲದ ಮುಖ್ಯೋಪಾಧ್ಯಾಯಿನಿ ಸೌರಭ ಪಿ., ಪ್ರಚಾರ ಸಮಿತಿಯ ಅಖಿಲೇಶ್ ನಗುಮುಗಂ ಹಾಗೂ ಅಬ್ದುಲ್ ಶಾಹಿದ್ ಉಪಸ್ಥಿತರಿದ್ದರು. ಮಾತೃ ಸಮಿತಿ ಅಧ್ಯಕ್ಷೆ ಜಸೀಲಾ ಸ್ವಾಗತಿಸಿ, ಸಮಿತಿ ಸಂಯೋಜಕರಾದ ಮನುರಾಜ್ ವಂದಿಸಿದರು. 


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries