HEALTH TIPS

ರಕ್ತಸಂಬಂಧದಲ್ಲಿ ವಿವಾಹ: ಕೇಂದ್ರದ ಪ್ರತಿಕ್ರಿಯೆ ಕೇಳಿದ ‘ಸುಪ್ರೀಂ’

ನವದೆಹಲಿ:  ರಕ್ತಸಂಬಂಧದಲ್ಲಿನ ವಿವಾಹಗಳ ಕುರಿತು ಕಾನೂನು ಜಾರಿ ಮಾಡುವ ಬಗ್ಗೆ ಪ್ರತಿಕ್ರಿಯೆ ನೀಡುವಂತೆ  ಕೇಂದ್ರ ಸರ್ಕಾರವನ್ನು ಸುಪ್ರೀಂ ಕೋರ್ಟ್ ಶುಕ್ರವಾರ ಕೇಳಿದೆ.

ಇದೇ ಸಂದರ್ಭದಲ್ಲಿ, ಸರ್ಕಾರಕ್ಕೆ ನಿರ್ದೇಶನ ನೀಡುವ ಉದ್ದೇಶವಿಲ್ಲ, ಬದಲಾಗಿ ಜಾಗೃತಿ ಮೂಡಿಸುವುದಷ್ಟೇ ನಮ್ಮ ಉದ್ದೇಶ ಎಂದು ಕೋರ್ಟ್ ತಿಳಿಸಿದೆ.

ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್‌ ಮತ್ತು ನ್ಯಾಯಮೂರ್ತಿಗಳಾದ ಜಾಯ್‌ಮಾಲ್ಯಾ ಬಾಗ್ಚಿ, ವಿ.ಮೋಹನಾ ಅವರನ್ನು ಒಳಗೊಂಡ ನ್ಯಾಯಪೀಠವು, ‘ರಕ್ತಸಂಬಂಧಗಳಲ್ಲಿನ ವಿವಾಹಗಳನ್ನು ನ್ಯಾಯಾಲಯ ನಿಯಂತ್ರಿಸಲು ಸಾಧ್ಯವಿಲ್ಲ. ಅದು ಸಂಪೂರ್ಣವಾಗಿ ಶಾಸಕಾಂಗದ ವ್ಯಾಪ್ತಿಗೆ ಒಳಪಡುತ್ತದೆ’ ಎಂದು ಹೇಳಿತು.

ರಕ್ತಸಂಬಂಧದಲ್ಲಿನ ವಿವಾಹಗಳಿಂದಾಗುವ ಪ್ರತಿಕೂಲ ಪರಿಣಾಮಗಳ ಬಗ್ಗೆ ಪ್ರಚಾರದ ಮೂಲಕ ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು ಎಂದು ಅರ್ಜಿದಾರರ ಪರ ವಕೀಲರು ತಿಳಿಸಿದರು. 





ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries