HEALTH TIPS

ಅಯೋಧ್ಯೆ: ಬೃಹತ್‌ ಶೋಭಾಯಾತ್ರೆ

ಅಯೋಧ್ಯೆ (PTI): ಶ್ರೀರಾಮನು 14 ವರ್ಷಗಳ ವನವಾಸ ಮುಗಿಸಿ ಅಯೋಧ್ಯಾ ನಗರಕ್ಕೆ ಪುನರಾಗಮಿಸಿದ ಸಂಭ್ರಮಾಚರಣೆ ಅಂಗವಾಗಿ ಶನಿವಾರ ಇಲ್ಲಿ ಬೃಹತ್‌ ಶೋಭಾಯಾತ್ರೆ ನಡೆಯಿತು.


ಉತ್ತರ ಪ್ರದೇಶ ಪ್ರವಾಸೋದ್ಯಮ ಮತ್ತು ಸಂಸ್ಕೃತಿ ಇಲಾಖೆ ಕಾರ್ಯಕ್ರಮ ಹಮ್ಮಿಕೊಂಡಿತ್ತು. ಸಾಕೇತ್‌ ಮಹಾವಿದ್ಯಾಲಯದಿಂದ ರಾಮಕಥಾ ಉದ್ಯಾನದವರೆಗೂ ಯಾತ್ರೆಯು ಸಾಗಿಬಂತು. 

'ರಾಮಚರಿತ ಮಾನಸ' ಮಹಾಕಾವ್ಯದ ಆಯ್ದ ಭಾಗಗಳು ಮತ್ತು ಸರ್ಕಾರದ ವಿವಿಧ ಯೋಜನೆಗಳ ಮಾಹಿತಿ ಒಳಗೊಂಡ 21 ಸ್ತಬ್ಧಚಿತ್ರಗಳನ್ನು ಪ್ರದರ್ಶಿಸಲಾಯಿತು.

ಪ್ರತಿವರ್ಷ ದೀಪಾವಳಿಯಲ್ಲಿ ಈ ದಿನವನ್ನು ಉತ್ತರ ಪ್ರದೇಶದ ಜನರು ಸಂಭ್ರಮದಿಂದ ಆಚರಿಸುತ್ತಾರೆ.

ಸರಯೂ ನದಿ ತಟದ 56 ವಿವಿಧ ಘಾಟ್‌ಗಳಲ್ಲಿ ಶನಿವಾರ ರಾತ್ರಿ ದಾಖಲೆಯ 30 ಲಕ್ಷ ಹಣತೆಗಳನ್ನು ಹಚ್ಚಿ ದೀಪೋತ್ಸವ ಆಚರಿಸಲಾಯಿತು.





ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries