ಬದಿಯಡ್ಕ: ಬದಿಯಡ್ಕ ಗ್ರಾಮ ಪಂಚಾಯಿತಿಯ ನೀರ್ಚಾಲು ವಾರ್ಡ್ ವ್ಯಾಪ್ತಿಯ ಕನ್ನೆಪ್ಪಾಡಿ ಅಂಗನವಾಡಿಯಲ್ಲಿ ಸೋಮವಾರ ಬೆಳಿಗ್ಗೆ ನೂತನ ಶೈಕ್ಷಣಿಕ ವರ್ಷದ ಅಂಗವಾಗಿ ಪುಟಾಣಿ ಮಕ್ಕಳ ಪ್ರವೇಶೋತ್ಸವ ಕಾರ್ಯಕ್ರಮವು ಅತ್ಯಂತ ಸಂಭ್ರಮದಿಂದ ಜರುಗಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಾರ್ಡ್ ಸದಸ್ಯ ಶ್ಯಾಮಪ್ರಸಾದ ಸರಳಿ ವಹಿಸಿದ್ದರು. ಬ್ಲಾಕ್ ಪಂಚಾಯಿತಿ ಸದಸ್ಯ ಮಹೇಶ್ ವಳಕ್ಕುಂಜ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಅಂಗನವಾಡಿಗಳು ಭದ್ರ ಬುನಾದಿಯಾಗಿದ್ದು, ಪಾಲಕರು ಮಕ್ಕಳ ಆರಂಭಿಕ ಕಲಿಕೆಗೆ ಪೂರಕ ವಾತಾವರಣ ಕಲ್ಪಿಸಬೇಕು ಎಂದು ಶುಭ ಹಾರೈಸಿದರು.
ಅಂಗನವಾಡಿ ಕಾರ್ಯಕರ್ತೆ ಹೈಮಾವತಿ ಸ್ವಾಗತಿಸಿದರು. ಸಹಾಯಕಿ ಜಯಲಕ್ಷ್ಮೀ ವಂದನಾರ್ಪಣೆ ಮಾಡಿದರು. ಕಾರ್ಯಕ್ರಮದಲ್ಲಿ ಅಂಗನವಾಡಿ ಅಭಿವೃದ್ಧಿ ಸಮಿತಿಯ ಸದಸ್ಯ ದೇವದಾಸ್, ಸ್ಥಳೀಯ ಗಣ್ಯರು ಹಾಗೂ ಮಕ್ಕಳ ಪಾಲಕರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

.jpg)
