ಕಾಸರಗೋಡು: ನಗರದ ಬಾಲಭವನ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪುಟಾಣಿ ಮಕ್ಕಳ ಪ್ರತಿಭೆಯನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಹಮ್ಮಿಕೊಳ್ಳಲಾಗಿದ್ದ "ಕಾಮನಬಿಲ್ಲು ಕೆ.ಜಿ. ಫೆಸ್ಟ್" ಕಾರ್ಯಕ್ರಮವು ಶಾಲಾ ಸಭಾಂಗಣದಲ್ಲಿ ಸಡಗರದಿಂದ ನೆರವೇರಿತು.
ಕಾರ್ಯಕ್ರಮವನ್ನು ಶಾಲಾ ಮುಖ್ಯ ಶಿಕ್ಷಕಿ ಲೀಲಾವತಿ ನಾಯರ್ ಅವರು ದೀಪ ಬೆಳಗಿಸಿ ಅಧಿಕೃತವಾಗಿ ಉದ್ಘಾಟಿಸಿದರು. ಶಾಲಾ ರಕ್ಷಕ-ಶಿಕ್ಷಕ ಸಂಘದ (ಪಿ.ಟಿ.ಎ.) ಅಧ್ಯಕ್ಷ ಮುಹಮ್ಮದ್ ಅಸ್ಲಾಂ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.
ಗಣ್ಯರ ಉಪಸ್ಥಿತಿ
ಕಾರ್ಯಕ್ರಮದಲ್ಲಿ ಶಾಲಾ ರಕ್ಷಕ-ಶಿಕ್ಷಕ ಸಂಘದ ಉಪಾಧ್ಯಕ್ಷೆ ಶೀಬಾ, ಕೋಶಾಧಿಕಾರಿ ಪೌಲೋಸ್, ಶಾಲಾ ಶೈಕ್ಷಣಿಕ ಸಲಹೆಗಾರ ಡಾ. ಕೆ.ಎನ್. ವೆಂಕಟ್ರಮಣ ಹೊಳ್ಳ, ಶಿಕ್ಷಕರಾದ ಸುದೀಪಾ, ಸುಶ್ಮಿತಾ ಹಾಗೂ ಶಾಲಾ ಸಿಬ್ಬಂದಿ ಮತ್ತು ಪಿ.ಟಿ.ಎ. ಸಮಿತಿಯ ಸರ್ವ ಸದಸ್ಯರು ಉಪಸ್ಥಿತರಿದ್ದರು.
ಶಾಲಾ ವಿದ್ಯಾರ್ಥಿಗಳ ಪ್ರಾರ್ಥನೆಯೊಂದಿಗೆ ಪ್ರಾರಂಭವಾದ ಸಮಾರಂಭದಲ್ಲಿ ಶಿಕ್ಷಕಿ ಪವಿಳ ಸ್ವಾಗತಿಸಿದರು. ಶಾಲಾ ಜತೆ ಕಾರ್ಯದರ್ಶಿ ದೀಪ್ತಿ ವಂದನಾರ್ಪಣೆ ಮಾಡಿದರು.


