HEALTH TIPS

ಮಣಿಪುರದಲ್ಲಿ ಉಗ್ರರ ಅಟ್ಟಹಾಸ: ಇಬ್ಬರು ಮಹಿಳೆಯರು ಸೇರಿ ನಾಲ್ವರ ಹತ್ಯೆ

ಇಂಫಾಲ್: ಮಣಿಪುರದ ಉಖ್ರುಲ್ ಜಿಲ್ಲೆಯಲ್ಲಿ ಶಂಕಿತ ಉಗ್ರರು ಎರಡು ಕಾರುಗಳನ್ನು ಗುರಿಯಾಗಿಸಿಕೊಂಡು ಗುಂಡಿನ ದಾಳಿ ನಡೆಸಿದ್ದು, ಇಬ್ಬರು ಮಹಿಳೆಯರು ಸೇರಿದಂತೆ ನಾಲ್ವರು ಮೃತಪಟ್ಟಿದ್ದಾರೆ.


ಶುಕ್ರವಾರ ಇಂಫಾಲ-ಉಖ್ರುಲ್ ರಸ್ತೆಯ ನ್ಯೂ ಹೆವೆನ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ. 

'ಶಸ್ತ್ರಸಜ್ಜಿತ ದುಷ್ಕರ್ಮಿಗಳು ಎರಡು ಕಾರುಗಳನ್ನು ಗುರಿಯಾಗಿಸಿಕೊಂಡು ಗುಂಡಿನ ದಾಳಿ ನಡೆಸಿದ್ದಾರೆ' ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

'ದುಷ್ಕರ್ಮಿಗಳ ದಾಳಿಗೆ ಎರಡು ಕಾರುಗಳಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಪುರುಷರು ಮತ್ತು ಇಬ್ಬರು ಮಹಿಳೆಯರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಎರಡೂ ವಾಹನಗಳ ಮುಂಭಾಗದ ಗಾಜುಗಳಲ್ಲಿ ಗುಂಡಿನ ಗುರುತುಗಳು ಪತ್ತೆಯಾಗಿವೆ' ಎಂದು ಅವರುರು ಹೇಳಿದ್ದಾರೆ.

ಈ ಘಟನೆಗೂ ಒಂದು ದಿನ ಮೊದಲು ಕಾಂಗ್‌ಪೋಕ್‌ಪಿ ಜಿಲ್ಲೆಯ ತಾಫೌ ಕುಕಿ ಗ್ರಾಮದ ಸಮೀಪ ನಡೆದ ಗುಂಡಿನ ಚಕಮಕಿಯಲ್ಲಿ 42 ವರ್ಷದ ಕುಕಿ ಸಮುದಾಯದ ಮಹಿಳೆಯೊಬ್ಬರು ಮೃತಪಟ್ಟಿದ್ದರು. ಘಟನೆಯಲ್ಲಿ ಇಬ್ಬರು ಪುರುಷರು ಗಾಯಗೊಂಡಿದ್ದರು. ನೆರೆಯ ಸೇನಾಪತಿ ಜಿಲ್ಲೆಯ ಕೈಲೆಂಜಾಂಗ್ ಪ್ರದೇಶದ ಸಮೀಪ ಎರಡು ಗುಂಪುಗಳ ನಡುವೆ ಗುಂಡಿನ ಚಕಮಕಿ ನಡೆದಿತ್ತು.

ಮಣಿಪುರದಲ್ಲಿ 2023ರ ಮೇ ತಿಂಗಳಿನಿಂದ ಮೈತೇಯಿ ಮತ್ತು ಕುಕಿ ಸಮುದಾಯಗಳ ನಡುವೆ ಜನಾಂಗೀಯ ಸಂಘರ್ಷ ನಡೆಯುತ್ತಿದ್ದು, ಈ ಸಂಘರ್ಷದಲ್ಲಿ ಇದುವರೆಗೆ ಕನಿಷ್ಠ 306 ಮಂದಿ ಮೃತಪಟ್ಟಿದ್ದು, 49 ಮಂದಿ ನಾಪತ್ತೆಯಾಗಿದ್ದಾರೆ.

ಈ ವರ್ಷದ ಫೆಬ್ರವರಿಯಿಂದ ಗುಡ್ಡಗಾಡು ಪ್ರದೇಶಗಳಲ್ಲಿ ಕುಕಿ ಮತ್ತು ನಾಗಾ ಸಮುದಾಯಗಳ ನಡುವಿನ ಸಂಘರ್ಷದಲ್ಲೂ ಕನಿಷ್ಠ 50 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. 







ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries