HEALTH TIPS

ಕಾಸರಗೋಡು ಜಿಲ್ಲಾ ಸೀನಿಯರ್ ಥ್ರೋಬಾಲ್ ಚಾಂಪಿಯನ್‌ಶಿಪ್: ಧರ್ಮತಡ್ಕ, ಮಾರ್ಪನಡ್ಕ ತಂಡಗಳಿಗೆ ಪ್ರಶಸ್ತಿ

ಕುಂಬಳೆ: ಕಾಸರಗೋಡು ಜಿಲ್ಲಾ ಸೀನಿಯರ್ ಥ್ರೋಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಪುರುಷರ ವಿಭಾಗದಲ್ಲಿ ಎಸ್.ಡಿ.ಪಿ.ಎಚ್.ಎಸ್.ಎಸ್. ಧರ್ಮತಡ್ಕ ಹಾಗೂ ಮಹಿಳಾ ವಿಭಾಗದಲ್ಲಿ ನವಯುಗ ಸ್ಪೋರ್ಟ್ಸ್ ಕ್ಲಬ್ ಮಾರ್ಪನಡ್ಕ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿವೆ. ಪುರುಷರ ವಿಭಾಗದಲ್ಲಿ ಕೊಡ್ಲಮೊಗರು ತಂಡ ಮತ್ತು ಮಹಿಳಾ ವಿಭಾಗದಲ್ಲಿ ಧರ್ಮತಡ್ಕ ತಂಡ ದ್ವಿತೀಯ ಸ್ಥಾನ ಪಡೆದುಕೊಂಡಿವೆ.

ಪಂದ್ಯಾಟವನ್ನು ನಿವೃತ್ತ ಪ್ರಾಂಶುಪಾಲ ರಾಮಚಂದ್ರ ಭಟ್ ಉದ್ಘಾಟಿಸಿದರು. ಜಿಲ್ಲಾ ಥ್ರೋಬಾಲ್ ಅಸೋಸಿಯೇಷನ್ ಅಧ್ಯಕ್ಷ ಕೆ. ಸೂರ್ಯ ಭಟ್ ಎಡನೀರು ಅಧ್ಯಕ್ಷತೆ ವಹಿಸಿದ್ದರು. ನಿವೃತ್ತ ಮುಖ್ಯೋಪಾಧ್ಯಾಯ ಮಹಾಲಿಂಗ ಭಟ್ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದರು. ಜಿ.ಆರ್. ಶಶಿಕಾಂತ್, ಅಶೋಕ ಧರ್ಮತಡ್ಕ, ಬಶೀರ್ ಅಹಮ್ಮದ್ ಮತ್ತು ಉದಯ್ ಎಸ್. ಶೆಟ್ಟಿ ಶುಭ ಹಾರೈಸಿದರು.

ಅಸೋಸಿಯೇಷನ್ ಜಿಲ್ಲಾ ಕಾರ್ಯದರ್ಶಿ ಸಂತೋಷ್ ಪಿ.ಎಚ್. ಸ್ವಾಗತಿಸಿ, ದೈಹಿಕ ಶಿಕ್ಷಕ ಸಂತೋಷ್ ಧರ್ಮತಡ್ಕ ವಂದಿಸಿದರು. ಬಳಿಕ ನಡೆದ ಸಮಾರೋಪ ಸಮಾರಂಭದಲ್ಲಿ ಜಿ.ಆರ್. ಶಶಿಕಾಂತ್ ವಿಜೇತ ತಂಡಗಳಿಗೆ ಬಹುಮಾನ ವಿತರಿಸಿದರು. 


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries