ನವದೆಹಲಿ: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ(ಎಸ್‌ಐಆರ್) ವಿವಾದ ಸಂಬಂಧ ರಾಜಕೀಯ ಜಟಾಪಟಿ ತೀವ್ರಗೊಳ್ಳುತ್ತಿರುವ ನಡುವೆಯೇ, ಡಿಸೆಂಬರ್ ಮೊದಲ ವಾರದಲ್ಲಿ ಸಂಸತ್ತಿನ ಚಳಿಗಾಲದ ಅಧಿವೇಶನ ಆರಂಭವಾಗುವ ಸಾಧ್ಯತೆ ಇದೆ.
ಮಹಿಳಾ ಮೀಸಲಾತಿ ಹಾಗೂ ಕ್ಷೇತ್ರ ಮರುವಿಂಗಡಣೆಯ ಸಂವಿಧಾನ ತಿದ್ದುಪಡಿ ಮಸೂದೆಗಳನ್ನು ಈ ಅಧಿವೇಶನದಲ್ಲಿ ಅಂಗೀಕರಿಸಲು ಕೇಂದ್ರ ಸರ್ಕಾರ ಯೋಜನೆ ರೂಪಿಸಿಕೊಳ್ಳುತ್ತಿದೆ.
2029ರ ಸಾರ್ವತ್ರಿಕ ಚುನಾವಣೆಗೂ ಮುನ್ನ ಸಂಸತ್ ಹಾಗೂ ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ 33ರಷ್ಟು ಮೀಸಲಾತಿ ಕಲ್ಪಿಸಲು ಅನುಕೂಲವಾಗುವಂತೆ, ಸಂವಿಧಾನ ತಿದ್ದುಪಡಿ ಮಸೂದೆಗೆ ಒಪ್ಪಿಗೆ ಪಡೆಯಲು ಸರ್ಕಾರ ಉತ್ಸುಕವಾಗಿದೆ.
ಕ್ಷೇತ್ರ ವಿಂಗಡಣೆಯ ಮೂಲಕ ಲೋಕಸಭೆಯ ಹಾಲಿ ಸದಸ್ಯ ಬಲವನ್ನು 543ರಿಂದ ಗರಿಷ್ಠ 850ಕ್ಕೆ ಹೆಚ್ಚಿಸುವ ಪ್ರಸ್ತಾಪವನ್ನು ಈ ಮಸೂದೆ ಒಳಗೊಂಡಿದೆ.
ಕ್ಷೇತ್ರ ಮರುವಿಂಗಡಣೆಯ ಸಂವಿಧಾನ ತಿದ್ದುಪಡಿ ಮಸೂದೆಯನ್ನು ಲೋಕಸಭೆಯಲ್ಲಿ ಏಪ್ರಿಲ್‌ನಲ್ಲಿ ಮಂಡಿಸಲಾಗಿತ್ತು. ಈ ಮಸೂದೆಗೆ ಸೋಲಾಗಿತ್ತು.



