HEALTH TIPS

ಇಂದು ಪಾರೆಕಟ್ಟ ಕನ್ನಡ ಗ್ರಾಮದಲ್ಲಿ ಜಿಲ್ಲಾ ಕನ್ನಡ ರಾಜ್ಯೋತ್ಸವ, ಕನ್ನಡ ದಿನಾಚರಣೆ ಸಂಭ್ರಮ

ಕಾಸರಗೋಡು: ಗಡಿನಾಡು ಕಾಸರಗೋಡು ಜಿಲ್ಲಾ ಕನ್ನಡ ರಾಜ್ಯೋತ್ಸವ ಹಾಗೂ ಜಿಲ್ಲಾ ಕನ್ನಡ ದಿನಾಚರಣೆ ಕಾರ್ಯಕ್ರಮವು ನವೆಂಬರ್ 1 ರಂದು ಬೆಳಗ್ಗೆ 9:00 ಗಂಟೆಯಿಂದ ಪಾರೆಕಟ್ಟದ ಕನ್ನಡ ಗ್ರಾಮದಲ್ಲಿ ವಿಜೃಂಭಣೆಯಿಂದ ಜರುಗಲಿದೆ.

ಕೇರಳ ರಾಜ್ಯ ಕನ್ನಡ ಭಾಷಾ ಅಲ್ಪಸಂಖ್ಯಾತರ ಸಾಂಸ್ಕೃತಿಕ ಮತ್ತು ಸಾಹಿತ್ಯಿಕ ಸಂಘಟನೆಯಾದ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ.), ಕಾಸರಗೋಡು ಹಾಗೂ ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತಿನ ಕೇರಳ ರಾಜ್ಯ ಘಟಕದ ಸಂಯುಕ್ತ ಆಶ್ರಯದಲ್ಲಿ ಈ ಅರ್ಥಪೂರ್ಣ ಸಮಾರಂಭವನ್ನು ಆಯೋಜಿಸಲಾಗಿದೆ.

ಜಿಲ್ಲೆಯಾದ್ಯಂತ ಕನ್ನಡ ಪ್ರತಿಜ್ಞೆಗೆ ಕರೆ

ಗಡಿನಾಡಿನಲ್ಲಿ ಕನ್ನಡ ಭಾಷೆ, ಸಾಹಿತ್ಯ ಹಾಗೂ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಜಿಲ್ಲೆಯಾದ್ಯಂತ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಕನ್ನಡಪರ ಸಂಘ-ಸಂಸ್ಥೆಗಳು ಮತ್ತು ಕನ್ನಡಿಗರು ಸ್ವಯಂಪ್ರೇರಿತರಾಗಿ ಕನ್ನಡ ಪ್ರತಿಜ್ಞೆಯನ್ನು ಸ್ವೀಕರಿಸುವಂತೆ ಆಯೋಜಕರು ಮನವಿ ಮಾಡಿದ್ದಾರೆ.

ಕಳೆದ 36 ವರ್ಷಗಳಿಂದ ನಿರಂತರವಾಗಿ ಪ್ರತಿಷ್ಠಾನದ ವತಿಯಿಂದ ನವೆಂಬರ್ 1 ರಂದು ಕನ್ನಡ ರಾಜ್ಯೋತ್ಸವ ಹಾಗೂ ಜಿಲ್ಲಾ ಕನ್ನಡ ದಿನಾಚರಣೆಯನ್ನು ಶ್ರದ್ಧೆಯಿಂದ ಆಚರಿಸಿಕೊಂಡು ಬರಲಾಗುತ್ತಿದೆ. ಕೇರಳ ಸರ್ಕಾರವು ಗಡಿನಾಡ ಕನ್ನಡಿಗರ ಭಾಷೆ ಮತ್ತು ಸಾಂಸ್ಕೃತಿಕ ಅಸ್ಮಿತೆಯನ್ನು ರಕ್ಷಿಸಲು 'ಸಮಗ್ರ ಕನ್ನಡ ಸಾಂಸ್ಕೃತಿಕ ಕನ್ನಡೀಕರಣ ಯೋಜನೆ'ಯನ್ನು ರೂಪಿಸಿ ಮುಂಬರುವ ರಾಜ್ಯ ಬಜೆಟ್‌ನಲ್ಲಿ ಅಧಿಕೃತವಾಗಿ ಘೋಷಿಸಬೇಕು ಎಂದು ಸಮಾರಂಭದಲ್ಲಿ ಒತ್ತಾಯಿಸಲಾಗುವುದು.

ನವೆಂಬರ್ 28, 29 ರಂದು ₹10 ಕೋಟಿ ವೆಚ್ಚದ 'ಕೇರಳ-ಕರ್ನಾಟಕ ಭವನ'ಕ್ಕೆ ಶಿಲಾನ್ಯಾಸ

ಕಾಸರಗೋಡು ಕನ್ನಡ ಗ್ರಾಮದಲ್ಲಿ ಇದೇ ನವೆಂಬರ್ 28 ಮತ್ತು 29 ರಂದು ಕೇರಳ ರಾಜ್ಯ 8ನೇ ಕನ್ನಡ ಸಮ್ಮೇಳನ-2026, ಕೇರಳ-ಕರ್ನಾಟಕ ಉತ್ಸವ ಹಾಗೂ ಕೇರಳ ರಾಜ್ಯ ಮಕ್ಕಳ ಸಾಹಿತ್ಯ ಉತ್ಸವ ಅದ್ಧೂರಿಯಾಗಿ ನಡೆಯಲಿದೆ.

ಈ ಮಹೋತ್ಸವದ ಅಂಗವಾಗಿ ಸುಮಾರು ₹10 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಪ್ರತಿಷ್ಠಿತ 'ಕೇರಳ-ಕರ್ನಾಟಕ ಭವನ'ದ ಶಿಲಾನ್ಯಾಸ ಸಮಾರಂಭ ಜರುಗಲಿದ್ದು, ಈ ಐತಿಹಾಸಿಕ ಕಾರ್ಯಕ್ರಮಕ್ಕೆ ಕೇರಳದ ಮುಖ್ಯಮಂತ್ರಿಗಳು, ಸಚಿವರು, ಕಾಸರಗೋಡು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲೆಯ ಸರ್ವ ಶಾಸಕರನ್ನು ಆಹ್ವಾನಿಸಲು ತೀರ್ಮಾನಿಸಲಾಗಿದೆ ಎಂದು ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಶಿವರಾಮ ಕಾಸರಗೋಡು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries