ಕುಲ್ಗಾಮ್ ಜಿಲ್ಲೆಯ ಮಿರ್ ಬಜಾರ್ ಸಮೀಪದ ಅಖ್ರಾನ್ ನಲ್ಲಿರುವ CRPF ನೆಲೆ ಮೇಲೆ ಈ ದಾಳಿ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Jammu & Kashmir | ಕುಲ್ಗಾಮ್ ನಲ್ಲಿ CRPF ನೆಲೆಯನ್ನು ಗುರಿಯಾಗಿಸಿ ಭಯೋತ್ಪಾದಕರಿಂದ ಗುಂಡಿನ ದಾಳಿ: ಮೂವರು ಯೋಧರಿಗೆ ಗಾಯ
0
ನವೆಂಬರ್ 11, 2026
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಭಯೋತ್ಪಾದಕರು CRPF ನೆಲೆಯನ್ನು ಗುರಿಯಾಗಿಸಿಕೊಂಡು ಬುಧವಾರ ಗುಂಡಿನ ದಾಳಿ ನಡೆಸಿದ್ದಾರೆ. ದಾಳಿಯಲ್ಲಿ ಕೇಂದ್ರ ಮೀಸಲು ಪೊಲೀಸ್ ಪಡೆಯ (CRPF) ಮೂವರು ಯೋಧರು ಗಾಯಗೊಂಡಿದ್ದು, ಭದ್ರತಾ ಪಡೆಗಳು ಪ್ರತಿದಾಳಿ ಆರಂಭಿಸಿವೆ ಎಂದು India Today ವರದಿ ಮಾಡಿದೆ.
Tags

